ಕೆಎಸ್ಸಾರ್ಟಿಸಿ ಬಸ್ ಪಲ್ಟಿ ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ.

ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಚಳ್ಳಕೆರೆ ರಸ್ತೆಯ ಶಿವಮೂರ್ತಿ ನಗರ ಬಳಿ ಇಂದು ಮುಂಜಾನೆ 4.30 ಸಮಯಕ್ಕೆ ನಡೆದಿದೆ.
ಶಹಾಪುರದಿಂದ ಬೆಂಗಳೂರು ಕಡೆ ಹೋಗುವಾಗ ಕೆಎಸ್ಸಾರ್ಟಿಸಿ ಬಸ್ ಚಾಲಕ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಸ್ ರಸ್ತೆಯ ಎಡಭಾಗಕ್ಕೆ ಪಲ್ಟಿ ಹೊಡೆದು ಈ ಘಟನೆ ಸಂಭವಿಸಿದೆ.
ಬಸ್ಸಿನಲ್ಲಿ ಮಹಿಳೆಯರು, ಪುರುಷರು, ಮಕ್ಕಳು ಸೇರಿದಂತೆ ಸುಮಾರು 50 ಜನರಿದ್ದರು ಎಂದು ತಿಳಿದು ಬಂದಿದೆ. ಇದರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದ್ದು, ಘಟನೆ ನಡೆಯುತ್ತಿದ್ದಂತೆ ಬಸ್ ಚಾಲಕ ಮತ್ತು ನಿರ್ವಾಹಕ ನಾಪತ್ತೆಯಾಗಿದ್ದಾರೆ. ವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಪ್ರಜಾನಾಡು.ಕಾಂ. ಡೆಸ್ಕ್

Leave a Reply

Your email address will not be published.

Send this to a friend