ಚಿತ್ರದುರ್ಗ: ಒಂದೇ ರಾತ್ರಿ ಐದು ಮನೆಗಳಲ್ಲಿ ಕಳ್ಳ ಖದೀಮರು ಸರಣಿ ಕಳ್ಳತನ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ನಡೆದಿದೆ.ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ರಸ್ತೆಯಲ್ಲಿ ಬರುವಮಸ್ಕಲ್ ಗ್ರಾಮದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿ ಐದು ಮನೆಗಳಲ್ಲಿ ಸರಣಿ ಕಳ್ಳತನ ನಡೆಸಿದ್ದು ಚಿನ್ನ, ಬೆಳ್ಳಿ ಸೇರಿದಂತೆ ಲಕ್ಷಾಂತರ ರೂಪಾಯಿ ಹಣ ದೋಚಿ ಪರಾರಿಯಾಗಿದ್ದಾರೆ. ಇದರಿಂದ ಮಸ್ಕಲ್ ಗ್ರಾಮದ ಜನತೆ ಬೆಚ್ಚಿ ಬಿದ್ದಿದ್ದಾರೆ. ಮಸ್ಕಲ್ ಗ್ರಾಮದ ಲಕ್ಷ್ಮೀದೇವಿ, ಚಂದ್ರಣ್ಣ, ಪುಷ್ಪಮ್ಮ, ಶಿವಲಿಂಗಣ್ಣ ಹಾಗೂ ಶಕುಂತಲಾ ಎನ್ನುವವರ ಮನೆಯಲ್ಲಿ ಕಳ್ಳರು ಸರಣಿ ಕಳ್ಳತನ ಮಾಡಿದ್ದಾರೆ.
ವಿಷಯ ತಿಳಿದ ತಕ್ಷಣವೇ ಪೋಲಿಸರು ಹಿರಿಯೂರು ಗ್ರಾಮಾಂತರ ಪಿಎಸ್ಐ ಪರಮೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಶ್ವಾನ ಹಾಗೂ ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್ಪಿ ರೋಷನ್ ಜಮೀರ್,ಸಿಪಿಐ ರಾಘವೇಂದ್ರ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಗ್ರಾಮದಲ್ಲಿ ಅನುಮಾನದ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಪೋಲಿಸರಿಗೆ ತಿಳಿಸಬೇಕು ಎಂದು ಗ್ರಾಮಸ್ಥರಿಗೆ ಸೂಚನೆಯನ್ನು ನೀಡಿದ್ದಾರೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖದೀಮರ ಬಂಧನಕ್ಕೆ ಪೋಲಿಸರು ಶೋಧ ಮುಂದುವರಿಸಿದ್ದಾರೆ.