ಬೆಂಗಳೂರು – ಮಾಸ್ಕ್ ಧರಿಸದ ಹಿನ್ನೆಲೆಯಲ್ಲಿ ವಿಸಲಾಗುತ್ತಿದ್ದ 1000ರೂ. ದಂಡವನ್ನು 250ರೂ.ಗೆ ಇಳಿಸಲಾಗಿದೆ. ಮಾಸ್ಕ್ ಹಾಕದವರಿಗೆ ದುಬಾರಿ ದಂಡ ವಿಧಿಸುತ್ತಿದ್ದ ದಂಡ
ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ದಿಢೀರನೆ ಎಚ್ಚೆತ್ತ ಬಿಬಿಎಂಪಿ ಹಾಗೂ ಸರ್ಕಾರ ದಂಡದ ಮೊತ್ತವನ್ನು ಕಡಿತಗೊಳಿಸಿದೆ.
ಬೆಂಗಳೂರಿನಲ್ಲಿ 1000ರೂ. ಇದ್ದ ದಂಡವನ್ನು 250ರೂ.ಗೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 500ರೂ. ಇದ್ದ ದಂಡವನ್ನು 100ರೂ.ಗೆ ಇಳಿಸಲಾಗಿದೆ. ಆದರೂ ಸಹ ಸಾರ್ವಜನಿಕರು ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸಹಕರಿಸಬೇಕು. ಇತರರಿಗೆ ಸೋಂಕು ಹರಡದಂತೆ ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಲಾಗಿದೆ.