ಪಕ್ಷೇತರ ಅಭ್ಯರ್ಥಿಯಾಗಿ ಡಿ.ಟಿ. ಶ್ರೀನಿವಾಸ್ ನಾಮಪತ್ರ ಸಲ್ಲಿಕೆ; ಬಿಜೆಪಿ ಅಭ್ಯರ್ಥಿಗೆ ಸೋಲಿನ ಭೀತಿ ..!

ಚಿತ್ರದುರ್ಗ : ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 38 ತಾಲೂಕುಗಳನ್ನೊಳಗೊಂಡ ವಿಧಾನಪರಿಷತ್ ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆ ಇದೇ ತಿಂಗಳ 28 ರಂದು ನಡೆಯಲಿದ್ದು ಇದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಹಿರಿಯೂರು ಕ್ಷೇತ್ರದ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿಟಿ ಶ್ರೀನಿವಾಸ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದರ ಜೊತೆಗೆ ಡಾ. ಹಾಲನೂರು ಎಸ್. ಲೇಪಾಕ್ಷಿ ಕೂಡ ಬಂಡಾಯ ಅಭ್ಯರ್ಥಿಯಾಗಿ ಪದವಿಧರ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡಗೆ ಸೋಲಿನ ಭೀತಿ ಎದುರಾಗಿದೆ ಎನ್ನಬಹುದು.
ಶಾಸಕಿ ಕೆ. ಪೂರ್ಣಿಮಾ ಪತಿ ಬಿಜೆಪಿಯ ಟಿಕೆಟ್ ಪಡೆಯಲು ಪ್ರಬಲ ಆಕಾಂಕ್ಷಿಯಾಗಿದ್ದರು. ಟಿಕೆಟ್ ತಪ್ಪಿದಗಿಂದಲೂ ಶ್ರೀನಿವಾಸ್ ಪಕ್ಷಕ್ಕೆ ಸೆಡ್ಡು ಹೊಡೆಯುವ ಸೂಚನೆ ನೀಡಿದ್ದರು. ಆದರೂ ಟಿಕೆಟ್ ದೊರೆಯದ ಕಾರಣ ಅಂತಿಮವಾಗಿ ಇಂದು ನಾಮಪತ್ರ ಸಲ್ಲಿಸಿ ಅಖಾಡಕ್ಕೆ ಇಳಿದಿದ್ದಾರೆ. ಇವರ ಜೊತೆಗೆ ಡಾ. ಹಲನೂರು ಎಸ್, ಲೇಪಾಕ್ಷಿ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತಿದ್ದಾರೆ. ಇಬ್ಬರ ಪಕ್ಷೇತರ ಅಭ್ಯರ್ಥಿಗಳ ಸ್ಪರ್ಧೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಂ. ಚಿದಾನಂದ ಗೌಡಗೆ ಬಹುತೇಕ ಸೋಲಿನ ಭೀತಿ ಎದುರಾಗಿದೆ ಎನ್ನಬಹುದು.

ಗೊಲ್ಲ ಮತ್ತು ಲಿಂಗಾಯತ ಮತಗಳು ನಿರ್ಣಾಯಕ : ವಿಧಾನಪರಿಷತ್ ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಗೊಲ್ಲ ಮತ್ತು ಲಿಂಗಾಯತ ಮತಗಳೇ ನಿರ್ಣಾಯಕ ಪಾತ್ರ ವಹಿಸುತ್ತದೆ ಎನ್ನಲಾಗುತ್ತಿದೆ. ಗೊಲ್ಲ ಸಮುದಾಯಕ್ಕೆ ಸೇರಿದ ಡಿ.ಟಿ. ಶ್ರೀನಿವಾಸ್ ಹಾಗೂ ಲಿಂಗಾಯತ ಸಮುದಾಯಕ್ಕೆ ಸೇರಿದ ಡಾ. ಹಾಲನೂರು ಎಸ್ ಲೇಪಾಕ್ಷಿ ತಮ್ಮ ಸಮುದಾಯದ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಾರೆ.
ಐದು ಜಿಲ್ಲೆಗಳಲ್ಲಿ ಡಿ.ಟಿ. ಶ್ರೀನಿವಾಸ್ ಜನರಿಗೆ ಚಿರಪರಿಚಿತರಾಗಿದ್ದು ಹೆಚ್ಚಿನ ಮತಗಳು ಲಭಿಸಲು ಬಹುದಾಗಿದೆ. ಬಿಜೆಪಿ ಪಕ್ಷಕ್ಕೆ ನೆಚ್ಚಿಕೊಂಡಿರುವ ಲಿಂಗಾಯಿತ ಮತಗಳು ಎಸ್ ಲೇಪಾಕ್ಷಿ ಪಾಲದಾರೆ ಬಿಜೆಪಿ ಅಭ್ಯರ್ಥಿ ಠೇವಣಿ ಕಳೆದುಕೊಂಡರು ಅಚ್ಚರಿ ಪಡುವಂತಿಲ್ಲ.

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಪೈಪೋಟಿ : ಆಗ್ನೇಯ ಪದವಿಧರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದು ಬಹುತೇಕ ಕಡಿಮೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳೇ ಪ್ರತಿ ಬಾರಿ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ. ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ರಮೇಶ್ ಬಾಬು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿಯಾಗಿ ಎಂ. ಚಿದಾನಂದ ಗೌಡ ಸ್ಪರ್ಧಿಸಿದ್ದು, ಇವರು ಹೇಳಿಕೊಳ್ಳುವಂತಹ ಅಭ್ಯರ್ಥಿಯಲ್ಲ, ಇವರಿಗೆ ವರ್ಚಸ್ಸು ಕಡಿಮೆ ಇದೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ಇನ್ನು ಜೆಡಿಎಸ್ ಅಭ್ಯರ್ಥಿಯಾಗಿ ಚೌಡರೆಡ್ಡಿ ತೂಪಲ್ಲಿ ಕೂಡ ಜೆಡಿಎಸ್ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ.
ಒಟ್ಟಾರೆಯಾಗಿ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಮತ್ತು ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಪತಿ ಡಿ.ಟಿ. ಶ್ರೀನಿವಾಸ್ ಮಧ್ಯೆ ನೇರ ನೇರ ಪೈಪೋಟಿ ನಡೆಯುತ್ತಿದ್ದು, ಇವರಿಬ್ಬರಲ್ಲಿ ಗೆಲುವು ಸಾಧಿಸುವವರು ಯಾರು ಎಂದು ಕಾದು ನೋಡಬೇಕಿದೆ.

Leave a Reply

Your email address will not be published.

Send this to a friend