ಹಿರಿಯೂರು : ಇಂದು ನಡೆಯುತ್ತಿರುವ ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಪಕ್ಷೇತರ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಮತ ಚಲಾಯಿಸಿದರು. ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಮತಗಟ್ಟೆಯಲ್ಲಿ ತನ್ನ ಬೆಂಬಲಿಗರೊಂದಿಗೆ ಆಗಮಿಸಿ ಮತದಾನ ಮಾಡಿದರು. ಐದು ಜಿಲ್ಲೆಗಳ 38 ತಾಲೂಕುಗಳನ್ನೊಳಗೊಂಡ ವಿಧಾನಪರಿಷತ್ ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಿಂದ ರಮೇಶ್ ಬಾಬು, ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ, ಬಿಜೆಪಿ ಪಕ್ಷದಿಂದ ಚಿದಾನಂದ ಗೌಡ ಹಾಗೂ ಪಕ್ಷೇತರ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಸೇರಿದಂತೆ ಮತ್ತಿತರರು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ತಿಳಿದು ಬಂದಿದೆ.
ಹಿರಿಯೂರು ತಾಲ್ಲೂಕಿನಲ್ಲಿ ಹಿರಿಯೂರು ನಗರದ ಜೂನಿಯರ್ ಕಾಲೇಜು 03, ಐಮಂಗಲ 01, ಧರ್ಮಪುರ 01, ಜವನಗೊಂಡನಹಳ್ಳಿ 01 ಒಟ್ಟು 06 ಮತಗಟ್ಟೆಗಳಿವೆ.