ತುಮಕೂರು : ಕಾಡುಗೊಲ್ಲರು ರಾಜಕೀಯದಲ್ಲಿ ಪಾಲು ಸಿಕ್ಕಿಲ್ಲ, ಪ್ರತಿ ಬಾರಿಯೂ ಕಾಡುಗೊಲ್ಲರಿಗೆ ಅನ್ಯಾಯವಾಗುತ್ತಿದೆ ಎಂದು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ಹಿಂದುಳಿದ ವರ್ಗಗಳ ಯುವ ನಾಯಕ ಡಾ. ಸಾಸಲು ಸತೀಶ್ ಬೇಸರ ವ್ಯಕ್ತಪಡಿಸಿದರು.
ಜಿಲ್ಲೆಯ ಶಿರಾ ತಾಲೂಕಿನ ಮುದ್ದೇನಹಳ್ಳಿ ಗೊಲ್ಲರಹಟ್ಟಿಯ ಚಿತ್ರಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಡುಗೊಲ್ಲರು ಪರಿಶಿಷ್ಟ ಪಂಗಡಕ್ಕೆ ಸೇರಬೇಕು ಎಂಬುದು ಕಾಡುಗೊಲ್ಲರ ಅಸ್ಮಿತೆ ಹೋರಾಟವಾಗಿದೆ. ಇದನ್ನು ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷದವರ ಜೊತೆ ಚರ್ಚೆ ಮಾಡಲಾಗುವುದು ಎಂದರು.
ಇಂದು ಅಮಾವಾಸ್ಯೆ ದಿನವಾಗಿದ್ದು ಖಾಸಗಿ ಭೇಟಿಯಾಗಿ ದೇವಸ್ಥಾನಕ್ಕೆ ಬಂದಿದ್ದೆನೆ ಎಂದರು. ನಾನು ನ್ಯಾಷಿನಲ್ ಪಾರ್ಟಿಯಲ್ಲಿ ಕೆಲಸ ಮಾಡುವನು ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ ಸಂಪೂರ್ಣ ಬದ್ಧನಾಗಿರುತ್ತೇನೆ, ಪಕ್ಷದ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ ಎಂದು ಸಾತೀಶ್ ಹೇಳಿದರು.ನಮಗೆ ಅನ್ಯಾಯವಾಗಿರುವುದು ಪಕ್ಷದ ವೇದಿಕೆಯಲ್ಲಿ ಮಾತನಾಡಲಾಗುತ್ತದೆ. ಕಾಂಗ್ರೆಸ್ ಪಕ್ಷದಿಂದ ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗೆ ಅನ್ಯಾಯವಾಗಿರುವುದು ಪಕ್ಷಕ್ಕೆ ಗೊತ್ತಿದೆ. ಅನ್ಯಾಯ ವಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ ಎಂದರು.
ನಿನ್ನೆ,ಮೊನ್ನೆ ಅದನ್ನೇ ಮಾತಾಡಲಾಗಿದೆ ಆದರೆ ಅದನ್ನು ಬಹಿರಂಗವಾಗಿ ನಾನು ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದರು. ಪಕ್ಷ ಬಯಸಿದರೆ ಶಿರಾ ಉಪಚುನಾವಣೆಯಲ್ಲಿ ಪ್ರಚಾರ ಮಾಡಲಾಗುವುದು ಎಂದರು ಹೇಳಿದರು. ಈಗಾಗಲೇ ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಆಯ್ಕೆ ಮಾಡಲಾಗಿದೆ. ಅಭ್ಯರ್ಥಿ ಅಧಿಕೃತವಾಗಿ ಆಯ್ಕೆ ಆದ್ಮೇಲೆ ನನಗೆ ಯಾವುದೇ ವೈಮನಸ್ಸು ಇಲ್ಲ, ಹಿಂದಿನ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನನಗೆ ಅನ್ಯಾಯವಾಗಿತ್ತು ಆಗಲೇ ನಾನು ಪಕ್ಷ ಬಿಟ್ಟಿಲ್ಲ, ಈಗ ಪಕ್ಷ ಬಿಡೋಕೆ ಆಗುತ್ತಾ ?. ನಾನು ಪಕ್ಷಕ್ಕೆ ಬದ್ಧವಾಗಿರುತ್ತೆನೆ ಎಂದರು.
ಪಕ್ಷ ತಿರ್ಮಾನಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊನೆಗೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಬಹುದು ಎಂದು ಪರೋಕ್ಷವಾಗಿ ತಿಳಿಸಿದರು.