ಮೈಸೂರು : ಸಾಂಸ್ಕೃತಿಕ ಜಿಲ್ಲೆ ಮೈಸೂರಿನಲ್ಲಿ ದಸರಾ ಸಂಭ್ರಮ ಅಧಿಕೃತವಾಗಿ ಪ್ರಾರಂಭಗೊಂಡಿದೆ. ಈ ಹಿನ್ನೆಲೆ ಇಂದು ಸಂಪ್ರದಾಯದಂತೆ ಮೈಸೂರು ರಾಜಮನೆತನದ ಪ್ರಮೋದಾದೇವಿ ಅವರ ಸಹಕಾರ ಕೋರಲಾಯಿತು.
ಸಹಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಪ್ರಮೋದಾ ದೇವಿ ಅವರನ್ನು ಭೇಟಿಯಾಗಿ ಸಂಭ್ರಮದ ದಸರಾಗೆ ಆಹ್ವಾನ ನೀಡಿ ಸಂಪ್ರದಾಯದಂತೆ ಸಹಕಾರ ಕೋರಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.