ಉಸಿರಾಟದ ತೊಂದರೆ, ಶಾಸಕ ರಾಮದಾಸ್ ಆಸ್ಪತ್ರೆಗೆ ದಾಖಲು.

ಮೈಸೂರು : ಮೈಸೂರಿನ ಕೃಷ್ಣರಾಜ ಕ್ಷೇತ್ರದ ಮಾಜಿ ಸಚಿವ ಹಾಗೂ ಬಿಜೆಪಿ ಹಾಲಿ ಶಾಸಕ ಎಸ್.ಎ. ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ 5 ಗಂಟೆ ಹೊತ್ತಿಗೆ ಅವರಿಗೆ ಏಕಾಏಕಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮದಾಸ್ ಅವರಿಗೆ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಮೈಸೂರಿನ ಜಯದೇವ ಆಸ್ಪತ್ರೆ ವೈದ್ಯರು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ರಾಮದಾಸ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದಲೂ ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದರು. ಇದೀಗ ದಿಢೀರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಪರೀಕ್ಷಾ ವರದಿ ಇನ್ನೂ ಬರಬೇಕಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Leave a Reply

Your email address will not be published.

Send this to a friend