ಚಿತ್ರದುರ್ಗ : ಮಾ.29ರಂದು ನಡೆಯಬೇಕಿದ್ದ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರ ಸ್ವಾಮಿ ಜಾತ್ರೋತ್ಸವವನ್ನು ಅದ್ದೂರಿಯಾಗಿ ನಡೆಯುತಿದ್ದ ಜಾತ್ರೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಾತ್ರೆ ಮಹೋತ್ಸವದ ಪ್ರಯುಕ್ತ ಗುರುವಾರ ನಾಯಕನಹಟ್ಟಿ ದೇವಸ್ಥಾನದಲ್ಲಿ ಜಿಲ್ಲಾಡಳಿತ ಸಭೆ ನಡೆಸಿತು. ಈ ವೇಳೆ ಜಾತ್ರ ಮಹೋತ್ಸವವನ್ನು ರದ್ದು ಗೊಳಿಸಿ ನಿರ್ಧಾರ ಪ್ರಕಟಿಸಿದೆ.
ಜನರ ಜಾತ್ರೆ ರದ್ದುಗೊಳಿಸಿದ್ದು, ವಿಧಿ, ವಿಧಾನ ಮತ್ತು ಸಾಂಪ್ರದಾಯಿಕವಾಗಿ ಸ್ಥಳೀಯರಿಂದ ಮಾತ್ರ ಜಾತ್ರೆ ನಡೆಸಲಾಗುತ್ತದೆ. ಆದರೆ ದೊಡ್ಡ ರಥೋತ್ಸವವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನೀಕೆರಿ ಷ್ಟಪಡಿಸಿದ್ದಾರೆ.
ಜಾತ್ರೆ ಅಂಗವಾಗಿ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯಲು ಅವಕಾಶವಿರುವುದಿಲ್ಲ. ಜೊತೆಗೆ ಹೊರಗಿನ ವಾಹನಗಳಿಗೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.