ರಾಮನಗರ: ದೊಡ್ಡ ಆಲಹಳ್ಳಿ ಗ್ರಾಮದ ಮನೆಯಲ್ಲಿ ಪರಿಶೀಲನೆ ನಡೆಸಿ ಅಲ್ಲಿರುವ ಇಟ್ಟಿಗೆಗಳನ್ನು ಕೂಡ ಕೊಂಡೋಯ್ಯಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಹೇಳಿದ್ದಾರೆ. ಇಂದು ಬೆಳ್ಮಳಂ ಬೆಳಿಗ್ಗೆಯೇ ಮಗನ ಮನೆ ಮೇಲೆ ನಡೆದ ಸಿಬಿಐ ದಾಳಿ ಕುರಿತು ಕೋಡಿಹಳ್ಳಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನನ್ನ ಮಗನನ್ನ ಕಂಡರೆ ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಪ್ರೀತಿ” ಅದಕ್ಕಾಗಿಯೇ ಪದೇ ಪದೇ ನಮ್ಮ ಮಗನನ್ನ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಸಿಬಿಐ ಅಧಿಕಾರಿಗಳ ಮೇಲೆ ತಮ್ಮ ಅಸಮಾಧಾನ ಹೊರಹಾಕಿದರು.
ದೊಡ್ಡ ಆಲಹಳ್ಳಿ ಗ್ರಾಮದ ಮನೆಯಲ್ಲಿ ಪರಿಶೀಲನೆ ನಡೆಸಿ ಅಲ್ಲಿರುವ ಇಟ್ಟಿಗೆಗಳನ್ನು ಕೊಂಡೊಯ್ಯಲಿ ಎಂದಿದ್ದಾರೆ. ಅವರಿಗೂ ಮಾಡೋಕೆ ಕೆಲಸವಿಲ್ಲ ಸುಮ್ಮನೆ ತಿರುಗುತ್ತಾರೆ. ಸುಮ್ಮನೆ ನಮ್ಮ ಹೊಟ್ಟೆ ಉರಿಸುತ್ತಾರೆ. ನಮ್ಮ ಮಗನನ್ನ ಅವರ ಮನೆಗೆ ಕರೆದುಕೊಂಡು ಕೂರಿಸಿಕೊಳ್ಳಲಿ. ಬೇಕಾದ್ರೆ ನಾನು ಹೋಗಿ ಕುಳಿತುಕೊಳ್ಳುತ್ತೇನೆ ಸಮಯಕ್ಕೆ ಸರಿಯಾಗಿ ಊಟ ಕೊಟ್ಟರೆ ಸಾಕು ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಪಕ್ಷ ಕೂಡ ಸಿಬಿಐ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.