ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜಿ. ಮೂರ್ತಿ ನಿಧನ‌.

ಬೆಂಗಳೂರು: ಸಿನಿಮಾ ಕಲಾನಿರ್ದೇಶಕ, ಚಿತ್ರನಿರ್ದೇಶಕ, ನಿರ್ಮಾಪಕ ಜಿ.ಮೂರ್ತಿ ವಿಧಿವಶರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಮನೆಯಲ್ಲಿ ಜಾರಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಅವರು ಬ್ರೈನ್‌ ಹ್ಯಾಮರೇಜ್‌ನಿಂದಾಗಿ ಇಹಲೋಕ ತ್ಯಜಿಸಿದ್ದಾರೆ. ಹಿರಿಯ ಚಿತ್ರ ನಿರ್ದೇಶಕ ಜಿ. ವಿ. ಅಯ್ಯರ್ ಅವರ ನಿಕಟವರ್ತಿಯಾಗಿದ್ದ ಜಿ. ಮೂರ್ತಿ, ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ಸುಮಾರು 80ಕ್ಕೂ ಹೆಚ್ಚು ಸಿನಿಮಾಗಳಿಗೆ ಕಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಚಂದ್ರಚಕೋರಿ’ ಮತ್ತು ‘ಕುರುನಾಡು’ ಚಿತ್ರಗಳ ಅತ್ಯುತ್ತಮ ಕಲಾ ನಿರ್ದೇಶನಕ್ಕಾಗಿ ಅವರಿಗೆ ಎರಡು ಬಾರಿ ರಾಜ್ಯ ಪ್ರಶಸ್ತಿ ಸಂದಿದೆ. ‘ಕುರುನಾಡು’ ಅವರ ನಿರ್ದೇಶನದ ಚಿತ್ರವೂ ಹೌದು. ಅವರ ನಿರ್ದೇಶನದ ‘ಶಂಕರ ಪುಣ್ಯಕೋಟಿ’ ಚಿತ್ರಕ್ಕೆ ಮೂರನೇ ಅತ್ಯುತ್ತಮ ಚಿತ್ರ ರಾಜ್ಯಪ್ರಶಸ್ತಿ (2008-09) ಗೌರವ ಸಂದಿದೆ. ವೈಷ್ಣವಿ, ಹಳ್ಳಿಯ ಮಕ್ಕಳು, ಅರಳುವ ಹೂಗಳು, ಸಿದ್ದಗಂಗ, ಸುಗಂಧಿ ಸೇರಿದಂತೆ ಒಟ್ಟು ಎಂಟು ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published.

Send this to a friend