ಕೇಂದ್ರ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ..

ನವದೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಇಂದು ನಿಧನರಾಗಿದ್ದಾರೆ.
ಬಿಜೆಪಿ ಸಹ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಜಸ್ವಾಂತ್ ಸಿಂಗ್ ನಿಧನರಾಗಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಜಸ್ವಂತ್ ಸಿಂಗ್ ಅವರು ದೇಶಕ್ಕಾಗಿ ಮೊದಲು ಸೈನಿಕರಾಗಿ, ನಂತರ ರಾಜಕೀಯ ದೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದರು. ಅಟಲ್ ಅವರ ಸರ್ಕಾರದ ಅವಧಿಯಲ್ಲಿ ಅವರು ಪ್ರಮುಖ ಖಾತೆಗಳನ್ನು ನಿಭಾಯಿಸಿ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅವರ ಈ ಸಾವನ್ನು ಕೇಳಿ ದುಃಖವಾಯಿತು ಎಂದು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published.

Send this to a friend