ಕಲಬುರಗಿ : ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮಂದು ವರೆಸಿದ್ದು, ರಾಜ್ಯದ ಹಿರಿಯ ಹೋರಾಟಗಾರ ಮಾರುತಿ ಮಾನ್ಪಡೆ (65) ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ ಎನ್ನಲಾಗಿದೆ.
ಕಮ್ಯುನಿಸ್ಟ್ ಪಾರ್ಟಿ ಮುಖಂಡರು ಆಗಿದ್ದ ಮಾನ್ಪಡೆ ಕಳೆದ ಎರಡು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.
ಮಾರುತಿ ಮಾನ್ಪಡೆ ಅವರಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ಅಕ್ಟೋಬರ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಾಮಾರಿ ಕೊರೋನಾದಿಂದ ನಿಧನರಾಗಿದ್ದು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.