ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ನಿಧನ.

ಹೊಸದಿಲ್ಲಿ: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಗುರುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಕಳೆದ ಹಲವು ದಿನಗಳಿಂದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು‌ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರ ನಿಧನದ ಬೆನ್ನಿಗೆ ಪುತ್ರ ಚಿರಾಗ್‌ ಪಾಸ್ವಾನ್‌, ‘ಪಪ್ಪಾ, ಇಂದು ನೀವು ಈ ಜಗತ್ತಿನಲ್ಲಿ ಇಲ್ಲ. ಆದರೆ ನೀವು ಎಲ್ಲೇ ಇರಿ, ನೀವು ಯಾವತ್ತೂ ನನ್ನೊಂದಿಗೆ ಇರುತ್ತೀರಿ. ಮಿಸ್‌ ಯೂ ಪಪ್ಪಾ’ ಎಂದು ಟ್ಟೀಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *

Send this to a friend