ಚೆನ್ನೈ: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ಗಾಯನವನ್ನು ನಿಲ್ಲಿಸಿದ್ದಾರೆ. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.
ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಜ್ಞ ವೈದ್ಯರ ತಂಡದಿಂದ ಆರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 24ರಂದು ಕೊರೊನಾ ವರದಿ ನೆಗೆಟಿವ್ ಬಂದಿತ್ತು.