ಬೆಂಗಳೂರು : ಶೂಟಿಂಗ್ ಸಮಯದಲ್ಲೇ ಹೃದಯಾಘತ ಸಂಭವಿಸಿದ್ದರಿಂದ ಹಿರಿಯ ನಟ ರಾಕ್ಲೈನ್ ಸುಧಾಕರ್ ಮೃತಪಟ್ಟಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಪೋಷಕ ಪಾತ್ರ ಹಾಗೂ ಕಾಮಿಡಿ ಪಾತ್ರಗಳಲ್ಲಿ ಅವರು ನಟಿಸಿದ್ದರು. ಅವರ ಅಗಲಿಕೆ ಇಡೀ ಚಿತ್ರರಂಗವೇ ಶೋಕ ವ್ಯಕ್ತಪಡಿಸಿದೆ.
ಕೆಲ ದಿನಗಳ ಹಿಂದಷ್ಟೇ ಸುಧಾಕರ್ಗೆ ಕೊರೋನಾ ಸೋಂಕು ತಗುಲಿತ್ತು. ಇದಕ್ಕಾಗಿ ಅವರು ಚಿಕಿತ್ಸೆ ಪಡೆದು ಬಂದಿದ್ದರು. ಅವರು ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಮತ್ತೆ ಶೂಟಿಂಗ್ ಕೆಲಸಗಳಲ್ಲಿ ಪಾಲ್ಗೊಂಡಿದ್ದರು. ಕೆ.ಎಂ. ಶಶಿಧರ್ ನಿರ್ದೇಶಿಸುತ್ತಿರುವ, ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಿಸುತ್ತಿರುವ ‘ಶುಗರ್ ಲೆಸ್’ ಸಿನಿಮಾ ಶೂಟಿಂಗ್ನಲ್ಲಿ ರಾಕ್ ಲೈನ್ ಸುಧಾಕರ್ ಪಾಲ್ಗೊಂಡಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ. ಈ ಬಗ್ಗೆ ನಿರ್ದೇಶಕ ಸುನಿ ಮಾಹಿತಿ ನೀಡಿದ್ದಾರೆ. ಇವರು ಇಪ್ಪತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.