ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಶರಣ್ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಇಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್‌ಎಂಟಿ ಗ್ರೌಂಡ್‌ನಲ್ಲಿ “ಅವತಾರ ಪುರುಷ” ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಶರಣ್ ಜೊತೆ ನಿರ್ದೇಶಕ ಸಿಂಪಲ್ ಸುನಿ ಮತ್ತು ನಿರ್ಮಾಪಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಸಹೋದರಿ ನಟಿ ಶೃತಿ ಹಾಗೂ ಪುತ್ರಿ ಗೌರಿಯೂ ಆಸ್ಪತ್ರೆಗೆ ಆಗಮಿಸಿದ್ದು ಚರಣ್ ಆರೋಗ್ಯ ವಿಚಾರಣೆ ಮಾಡಿದ್ದಾರೆ.ಇದೇ ವೇಳೆ ಮಾತನಾಡಿದ ನಟಿ ಶೃತಿ ಚರಣ್ ಆರೋಗ್ಯವಾಗಿ ಇದ್ದಾರೆಂದು ತಿಳಿಸಿದ್ದಾರೆ.