ಬೆಂಗಳೂರು -ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿ ಮಾಜಿ ಸಚಿವ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ವಿಧಾನಪರಿಷತ್‍ನ ಶಿಕ್ಷಕರ ಪದವೀಧರ ಕ್ಷೇತ್ರದ ಚುನಾವಣಾ ಸಿದ್ದತೆಗೆ ಸಂಬಂಸಿದ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ