ಬೆಂಗಳೂರು : ಕೆಪಿಸಿಸಿ ಕಚೇರಿಯಲ್ಲಿ ಶಿರಾ ವಿಧಾನಸಭೆ ಉಪಚುನಾವಣೆ ಬಗ್ಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ.
ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ. ಪರಮೇಶ್ವರ, ಮಾಜಿ ಸಚಿವರಾದ ಟಿ.ಬಿ ಜಯಚಂದ್ರ, ಮಾಜಿ ಸಂಸದರಾದ ಮುದ್ದಹನುಮೇಗೌಡ, ಬಿ.ಎನ್ ಚಂದ್ರಪ್ಪ, ಮಾಜಿ ಶಾಸಕರಾದ ಕೆ.ಎನ್ ರಾಜಣ್ಣ, ರಫೀಕ್ ಅಹಮದ್, ಕೆ.ಷಡಾಕ್ಷರಿ, ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ. ಸಾಸಲು ಸತೀಶ್ ಸೇರಿದಂತೆ ಮತ್ತಿತರರ ನಾಯಕರು ಪಾಲ್ಗೊಂಡಿದ್ದರು.
ನಿನ್ನೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ ಸಾಸಲು ಸತೀಶ್ ಜೊತೆ ಡಿಕೆಶಿ ಸಭೆ ಕೂಡ ನಡೆಸಿದ್ದರು.