ತುಮಕೂರು : ಶಿರಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇಂದು ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ ಎನ್. ರಾಜಣ್ಣ ಅವರನ್ನು ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿಬಿ. ಜಯಚಂದ್ರ ಅವರು ರಾಜಣ್ಣ ಅವರ ಮನೆಗೆ ಹೋಗಿ ಭೇಟಿ ಮಾಡಿದ್ದಾರೆ. ಸತ್ಯನಾರಾಯಣ ಅವರ ನಿಧನದ ನಂತರ ತೆರವಾದ ಸ್ಥಾನಕ್ಕೆ ಶೀಘ್ರದಲ್ಲೇ ಉಪ ಚುನಾವಣೆ ನಡೆಯಲಿದ್ದು ಶಿರಾ ಉಪಚುನಾವಣೆಗೆ ನಾನು ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ರಾಜಣ್ಣ ಹೇಳಿದ್ದರು. ಕೆ.ಎನ್. ರಾಜಣ್ಣ ಶಿರಾ ವಿಧಾನಸಭಾ ಕ್ಷೇತ್ರದ ಟಿಕೆಟ್ ಹೇಳಿಕೆಯಿಂದ ಟಿ.ಬಿ. ಜಯಚಂದ್ರ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಜೊತೆಗೆ ಕೇಂದ್ರ ರಾಜಣ್ಣ ಬಂಡಾಯದ ಬಾವುಟ ಹಾರಿಸಲು ಮುನ್ಸೂಚನೆ ನೀಡಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಪಕ್ಷದ ಮುಖಂಡರು ಸಭೆ ನಡೆಸಿದ್ದರು.
ಇದಕ್ಕೂ ಮೊದಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅನ್ನು ಕೆ.ಎನ್. ರಾಜಣ್ಣ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದರು. ಶಿರಾ ಉಪಚುನಾವಣೆಯಲ್ಲಿ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ವಶಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ ತುಮಕೂರು ಕಾಂಗ್ರೆಸ್ ಮುಖಂಡರ ಜೊತೆ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮುಖಂಡರೊಂದಿಗೆ ಚರ್ಚಿಸಿ ಟಿ.ಬಿ. ಜಯಚಂದ್ರ ಅವರನ್ನು ಶಿರಾ ಬೈ ಎಲೆಕ್ಷನ್ ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ತಿರ್ಮಾನಿಸಲಾಯಿತು. ನಂತರ ಕೆ.ಎನ್. ರಾಜಣ್ಣ ಹಾಗೂ ಡಾ.ಜಿ. ಪರಮೇಶ್ವರ್ ಗೆ ಉಪಚುನಾವಣೆ ನೇತೃತ್ವದಲ್ಲಿ ಎದುರಿಸಲು ಪಕ್ಷ ತಿರ್ಮಾನಿಸಲಾಗಿದೆ.
ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಹಾಗೂ ಶಿರಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರ ಮುಸುಕಿನ ಗುದ್ದಾಟಕ್ಕೆ ಇಂದು ಜಯಚಂದ್ರ ದಂಪತಿ ರಾಜಣ್ಣನ ಮನೆಗೆ ಹೋಗಿ ರಾಜಣ್ಣನವರನ್ನು ಸನ್ಮಾನಿಸಿ, ಅವರ ಮನೆಯಲ್ಲಿ ತಿಂಡಿ ಮಾಡಿಕೊಂಡು ಮಹತ್ವದ ಚರ್ಚೆ ಮಾಡಿ ಉಪ ಚುನಾವಣೆಯಲ್ಲಿ ಗೆಲುವಿಗೆ ಸಹಾಕರಿಸಿ ಎಂದು ಸಹಕಾರ ಕೋರಲಾಗಿದೆ ಎಂದು ತಿಳಿದು ಬಂದಿದೆ. ಜೊತೆಗೆ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುವಂತೆ ರಾಜಣ್ಣ ಅವರನ್ನು ಸಹಕಾರ ಕೋರಿದ್ದಾರೆ.
ಇದೀಗ ಇವರಿಬ್ಬರ ಮಧ್ಯೆ ಇದ್ದ ಗೊಂದಲಕ್ಕೆ ಜಯಚಂದ್ರ ತೆರೆಎಳೆದಿದ್ದಾರೆ.
ವರದಿ . ಶಿರಾ ಶ್ರೀಮಂತ್