ಶಿರಾ : ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ನವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಗುರುವಾರ ಚುನಾವಣಾಧಿಕಾರಿ ಡಾ.ನಂದಿನಿ ದೇವಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ವಿವಿಧ ಶಾಸಕರು, ಮಾಜಿ ಶಾಸಕರು, ಮುಖಂಡರು ಸೇರಿದಂತೆ ಪಕ್ಷದ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.