ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಶೀಘ್ರದಲ್ಲೇ ಅಧ್ಯಕ್ಷರ ನೇಮಕ : ಶಿರಾ ಶಾಸಕ ರಾಜೇಶ್ ಗೌಡ.

ಚಿತ್ರದುರ್ಗ : ಶಿರಾ ಉಪ ಚುನಾವಣೆಯಲ್ಲಿ ಘೋಷಣೆ ಮಾಡಿ ನೆನೆಗುದಿಗೆ ಬಿದ್ದಿರುವ ಕಾಡುಗೊಲ್ಲ ಅಭಿವೃದ್ಧಿ ನಿಗಮ ಅತಿ ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಲಾಗುವುದು ಎಂದು ಶಿರಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಸಿ.ಎಂ. ರಾಜೇಶ್ ಗೌಡ ಹೇಳಿದರು. ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಡುಗೊಲ್ಲರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲು ಸಿಎಂ ಬಿಎಸ್ವೈ ಬಹಳ ಆಸಕ್ತರಾಗಿದ್ದಾರೆ. ಹಾಗಾಗಿ ತ್ವರಿತ ಗತಿಯಲ್ಲಿ ಅಧ್ಯಕ್ಷರನ್ನು ಹಾಗೂ ನಿರ್ದೇಶಕರನ್ನು ನೇಮಕ ಮಾಡಲಾಗುವುದು ಎಂದರು. ಸಮುದಾಯದಲ್ಲಿ ಆಕಾಂಕ್ಷೆಗಳು ಹೆಚ್ಚು ಇರುತ್ತಾರೆ. ಸೌಹಾರ್ದಯುತವಾಗಿ ಒಬ್ಬ ವ್ಯಕ್ತಿಯನ್ನು ಆಯ್ಕೆ ಮಾಡಿ ನಿಗಮವನ್ನು ಶೀಘ್ರಗತಿಯಲ್ಲಿ ಪ್ರಕ್ರಿಯೆ ಮುಗಿಸಲಾಗುವುದು ಎಂದರು. ಕಾಡುಗೊಲ್ಲ ಅಭಿವೃದ್ಧಿ ನಿಗಮ ಜಾರಿಗೆ ಬರುವುದಕ್ಕೆ ವಿಳಂಬವಾಗಿದೆ. ನಾನು ಸಿಎಂ ಬಿಎಸ್ವೈ ಅವರನ್ನು ಖುದ್ದಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಹಿರಿಯೂರು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಕೂಡ ಭೇಟಿ ಮಾಡಿದ್ದಾರೆ. ತ್ವರಿತ ಗತಿಯಲ್ಲಿ ಅಧ್ಯಕ್ಷರನ್ನು ಹಾಗೂ ನಿರ್ದೇಶಕರನ್ನು ನೇಮಕ ಮಾಡಿ ಎಂದು ಸಿಎಂ ಬಿಎಸ್ವೈ ಗೆ ಮನವಿ ಮಾಡಿದ್ದೆವೆ ಎಂದರು. ಸಿಎಂ ಬಿಎಸ್ವೈ ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದರು. “ಶಿರಾ ಉಪಚುನಾವಣೆಯಲ್ಲಿ ಗೆಲುವು ಪಡೆದ್ರಿ, ನಿಗಮ ಕಾರ್ಯರೂಪಕ್ಕೆ ಬಂದಿಲ್ಲ” ಎನ್ನುವ ಮಾತಿಗೆ ಪ್ರತಿಕ್ರಿಯೆ ನೀಡಿರುವ ಅವರು ನನಗೆ ಕಳಾಜಿ ಇದೆ ಎಂದರು. ಈಗಾಗಲೇ ಮೊದಲೇ ಹೇಳಿದಂತೆ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಹೆಚ್ಚು ಇದ್ದಾರೆ. ಸೌಹಾರ್ದಯುತವಾಗಿ ಎಲ್ಲರನ್ನೂ ಮನವೊಲಿಸಿ ಒಬ್ಬರನ್ನು ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದರು.

ಗೊಲ್ಲರಹಟ್ಟಿ ಗಳು ಕಂದಾಯ ಗ್ರಾಮ : ಗೊಲ್ಲರಹಟ್ಟಿಗಳು ಇದುವರೆಗೂ ಕಂದಾಯ ಗ್ರಾಮಗಳಾಗಿಲ್ಲ. ಶಿರಾ ಕ್ಷೇತ್ರದಲ್ಲಿ ಸುಮಾರು 140 ಗೊಲ್ಲರಟ್ಟಿ ಕಂದಾಯ ಗ್ರಾಮಗಳಾಗಿ ಆಗಬೇಕಿದೆ ನಾನು ಕೂಡ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಶಿರಾ ಕ್ಷೇತ್ರದಲ್ಲಿ ಹೆಚ್ಚು ಕಾಡುಗೊಲ್ಲ ಸಮುದಾಯ ಇದ್ದು ಸುಮಾರು 78 ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕಿದೆ ಎಂದರು. ಕೊರತೆಗಳನ್ನು ಕಂದಾಯ ಗ್ರಾಮಗಳಾಗಿ ಮಾಡದಿದ್ದರೆ ಅವರಿಗೆ ಯಾವುದೇ ಹಕ್ಕು ಇರುವುದಿಲ್ಲ, ಕೇಂದ್ರ ಸರ್ಕಾರದಿಂದ ಬರುವ ಸೌಲಭ್ಯಗಳು ಸಿಗುವುದಿಲ್ಲ . ಸಿಸಿ ರಸ್ತೆ, ಒಳಚರಂಡಿ, ವಸತಿ ವ್ಯವಸ್ಥೆ ಆಗಿರಬಹುದು ಇವೆಕ್ಕೆಲ್ಲ ಕೊರತೆ ಬರುತ್ತದೆ. ಆದ್ದರಿಂದ ಗೊಲ್ಲರಹಟ್ಟಿಗಳನ್ನು ಶೀಘ್ರದಲ್ಲೇ ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಿ ಎಂದು ಮನವಿ ಸಲ್ಲಿಸಲಾಗಿದೆ. ಅವರು ಕೂಡ ಕಂದಾಯ ಇಲಾಖೆ ಹಾಗೂ ತಹಶೀಲ್ದಾರ್ ಗೆ ನಿರ್ದೇಶನ ಕೊಟ್ಟಿದ್ದಾರೆ. ಶಿರಾ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ 28 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಮಾಡಲಾಗಿದೆ. ಬಾಕಿ ಉಳಿದ 78 ಗೊಲ್ಲರಹಟ್ಟಿಗಳನ್ನು ಈ ವರ್ಷದ ಅಂತ್ಯದಲ್ಲಿ ಕಂದಾಯ ಗ್ರಾಮಗಳಾಗಿ ಮಾಡಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವೇ ಎಂದು ಶಾಸಕ ಡಾ. ಸಿ.ಎಂ. ರಾಜೇಶ್ ಗೌಡ ಭರವಸೆ ನೀಡಿದರು

Leave a Reply

Your email address will not be published.

Send this to a friend