ಮಧ್ಯವರ್ತಿಗಳ ಮೊರೆ ಹೋಗದೇ ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ತೆರಳಿ ಅರ್ಜಿ ಸಲ್ಲಿಸಿ.

ಶಿರಾ, ಸೆಪ್ಟೆಂಬರ್ 15 : ರೈತರು ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹೋಬಳಿ ಮಟ್ಟದಲ್ಲಿ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ನಾಹಿದಾ ಜಮ್ ಜಮ್ ಹೇಳಿದರು.

ಇಂದು ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಮುದಗೆರೆ
ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ರೈತರಿಂದ ಅರ್ಜಿಗಳನ್ನು ಸ್ವೀಕರಿಸಿ ಮಾತನಾಡಿದರು.
ಪಹಣಿಗಳಲ್ಲಿ ಲೋಪದೋಷ, ಪೌತಿಖಾತೆ, ವಾಸು ಖಾತೆ, ಸೇರಿದಂತೆ ಇಲಾಖೆಗೆ ಸಂಬಂಧಿಸಿದಂತಹ ಯಾವುದೇ ಕೆಲಸಗಳಿಗೆ ದಾಖಲೆಗಳ ಸಮೇತ ಅರ್ಜಿಗಳನ್ನು ಸಲ್ಲಿಸಿದಲ್ಲಿ ನಿಮ್ಮ ಕೆಲಸ ಸುಲಭವಾಗಿ ಮಾಡಿಸಿಕೊಳ್ಳಬಹುದು ಎಂದರು.

ನಂತರ ಹೋಬಳಿ ಮಟ್ಟದ ಪಿಂಚಣಿ ಅದಾಲತ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿದರು. ಪಂಚ ಸೌಲಭ್ಯಗಳಾದ ಪಡಿತರ ಚೀಟಿ, ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನ ವೇತನ, ವಸತಿ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕಿದೆ. ಸರಕಾರದ ಯಾವುದೇ ಯೋಜನೆ, ಕಾರ್ಯಕ್ರಮಗಳ ಸದುಪಯೋಗ ಪಡೆಯಲು ಅರ್ಹ ಫಲಾನುಭವಿಗಳು ಮಧ್ಯವರ್ತಿಗಳ ಮೊರೆ ಹೋಗದೇ ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ತೆರಳಿ ಅರ್ಜಿ ಸಲ್ಲಿಸುವಂತೆ ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಕಸಬಾ ವೃತ್ತದ
ಕಂದಾಯ ಅಧಿಕಾರಿ ಸೇರಿದಂತೆ ಗ್ರಾಮಲೆಕ್ಕಿಗರು,ಗ್ರಾಮದ ಮುಖಂಡರು ಭಾಗವಹಿಸಿದ್ದರು.

ವರದಿ: ಶ್ರೀಮಂತ್ ಕುಮಾರ್ ಶಿರಾ.

Leave a Reply

Your email address will not be published.

Send this to a friend