ತುಮಕೂರು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಡಾ ಸಾಸಲು ಸತೀಶ್ ನೇಮಕ, ಮಾಜಿ ಸಿಎಂ ಸಿದ್ದರಾಮಯ್ಯ ನೇಮಕಾತಿ ಪತ್ರ ವಿತರಣೆ.

ತುಮಕೂರು : ತುಮಕೂರು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಹಿಂದುಳಿದ ವರ್ಗಗಳ ಭವಿಷ್ಯದ ಯುವ ನಾಯಕ ಹಾಗೂ ಕಾಡುಗೊಲ್ಲ ಸಮುದಾಯದ ಮುಖಂಡ ಡಾ. ಸತೀಶ್ ಸತೀಶ್ ನವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನವರು ನೇಮಕಾತಿ ಪತ್ರ ನೀಡಿ ಅಭಿನಂದಿಸಿದ್ದಾರೆ.

ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ಹಿಂದುಳಿದ ವರ್ಗಗಳ ಯುವ ನಾಯಕ ಹಾಗೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ.ಸತೀಶ್ ಸಾಸಲು ಅವರನ್ನು ನೇಮಕಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿನ್ನೆ ಆದೇಶ ಹೊರಡಿಸಿದ್ದಾರೆ. ಡಾ. ಸತೀಶ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿತ್ತು.

ಸತೀಶ್ ಇವರು ತಕ್ಷಣದಿಂದ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕೆಪಿಸಿಸಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ, ಬಲವರ್ಧನೆಗೆ ಕಾರ್ಯೋನ್ಮುಖರಾಗುವಂತೆ ಸೂಚಿಸಿದ್ದಾರೆ.

ಇದರ ಜೊತೆಗೆ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಟಿಬಿ. ಜಯಚಂದ್ರ, ಮಾಜಿ ಸಂಸದ ಪಿ.ಎನ್. ಮುದ್ದೆಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ಬಿಎನ್ ಚಂದ್ರಪ್ಪ, ಸೇರಿದಂತೆ ಅನೇಕರು ಅಭಿಮಾನಿಗಳು ಭವಿಷ್ಯದ ಯುವ ನಾಯಕನಿಗೆ ಶುಭ ಹಾರೈಸಿದ್ದಾರೆ.

Leave a Reply

Your email address will not be published.

Send this to a friend