ನವದೆಹಲಿ : ಶಾಸಕ ಸಿ. ಸತ್ಯನಾರಾಯಣ ಅವರ ನಿಧನದ ನಂತರ ತೆರವಾದ ಶಿರಾ ವಿಧಾನಸಭಾ ಕ್ಷೇತ್ರ ಸ್ಥಾನಕ್ಕೆ ಶೀಘ್ರದಲ್ಲೇ ಉಪ ಚುನಾವಣೆ ನಡೆಯಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಮಾತಾನಾಡಿದ್ದಾರೆಂದು ತಿಳಿದು ಬಂದಿದೆ. ಈಗಾಗಲೇ ಎಲ್ಲಾ ಪಕ್ಷಗಳು ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ಬಗ್ಗೆಯೂ ಬಿಎಸ್ ಯಡಿಯೂರಪ್ಪ ಮಾತನಾಡಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ.
‘ಬಿಜೆಪಿ ಶಿರಾ ಉಪ ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ’ ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ವೈ ಎಚ್.ಡಿ. ಕುಮಾರಸ್ವಾಮಿ ಭೇಟಿ ಬಗೆಗಿನ ಊಹಾಪೋಹದಲ್ಲಿ ಹುರುಳಿಲ್ಲ. ವಿಪಕ್ಷ ನಾಯಕನಾಗಿ ಬಂದು ಭೇಟಿ ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಚರ್ಚೆ ಮಾಡಿದ್ದಾರೆ ಎಂದು ಹೇಳಿದರು.