ಚಿತ್ರದುರ್ಗದಲ್ಲಿ 97 ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆ

ಚಿತ್ರದುರ್ಗ:- ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 97 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆಯಾದಂತಾಗಿದ್ದು, ಭಾನುವಾರದ ವರದಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 23,  ಹಿರಿಯೂರು-05, ಚಳ್ಳಕೆರೆ-11, ಮೊಳಕಾಲ್ಮುರು 26, ಹೊಸದುರ್ಗ 11 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 21 ಸೇರಿದಂತೆ ಒಟ್ಟು 97 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
 
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 792 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 97 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1,712 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 863 ಸಕ್ರಿಯ ಪ್ರಕರಣಗಳು ಇವೆ.

Leave a Reply

Your email address will not be published. Required fields are marked *

Send this to a friend