ತುಮಕೂರು: ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ ಎಂದು ತುಮಕೂರು ಸಿದ್ದಗಂಗಾ ಶ್ರೀಗಳು ಹೇಳಿದ್ದಾರೆ. ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ವಿಚಾರವಾಗಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯೆ ನೀಡಿರುವ ಅವರು ಪ್ರಾಧಿಕಾರ ರಚನೆ ನನಗೆ ಆಶ್ಚರ್ಯ ಎನಿಸುತ್ತದೆ. ಇದರ ಬದಲು ಎಲ್ಲಾ ಸಮಾಜ ಜಾತಿಯಲ್ಲಿ ಇದ್ದಂತಹ ಹಿಂದುಳಿದವರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಸರ್ಕಾರ ಅಂಥವರಿಗೆ ಹೆಚ್ಚು ಒತ್ತುಕೊಡುವ ಕೆಲಸ ಮಾಡಿದರೆ ಒಳ್ಳೆಯದು. ಎಲ್ಲಾ ಸಮಾಜದಲ್ಲೂ ತುಂಬಾ ಬಡವರಿದ್ದಾರೆ, ಬಡತನದ ಶ್ರೇಣಿ ಹೆಚ್ವಿದೆ. ಆರ್ಥಿಕವಾಗಿ ಕಷ್ಟದಲ್ಲಿದ್ದವರಿಗೆ ಸರ್ಕಾರ ಹೆಚ್ಚು ಒತ್ತು ಕೊಡಬೇಕು. ಸರ್ಕಾರ ಇರೋದು ಇಡೀ ರಾಜ್ಯದ ಅಭಿವೃದ್ಧಿಗೆ, ಅದು ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗ ದಲ್ಲಿ ಅವಕಾಶ ಕೊಡುವ ವ್ಯವಸ್ಥೆ ಕಲ್ಪಿಸಿಕೊಟ್ಟರೆ ತುಂಬಾ ಸಂತೋಷ. ಅದುಬಿಟ್ಟು ಒಂದು ಜಾತಿ ಪ್ರಾಧಿಕಾರ ಮಾಡಿದರೆ ಮುಂದೆ ಪ್ರತಿಯೊಬ್ಬರೂ ಒಂದೊಂದು ಪ್ರಾಧಿಕಾರ ಕೇಳುತ್ತಾರೆ ಎಂದಿದ್ದಾರೆ.