ಉಡುಪಿ : ಯುವಕನೊಬ್ಬ ಆಸ್ಪತ್ರೆಗೆ ದಾಖಲಿಸಿದ ಯುವತಿ ಕೊನೆಯುಸಿರೆಳೆದಿದ್ದು ಇದೀಗ ಯುವಕ ನಾಪತ್ತೆಯಾಗಿದ್ದಾರೆ. ಈ ಘಟನೆ ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ರಕ್ಷಿತಾ ನಾಯಕ್ ಎಂಬಾಕೆಯನ್ನು ಪ್ರಶಾಂತ್ ಕೊಂದರು ಎನ್ನುವ ಯುವಕ ಶನಿವಾರ ಸಂಜೆ 6:30 ಸಮಯದಲ್ಲಿ ಆಟೋದಲ್ಲಿ ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲು ಮಾಡಿಸಿದ್ದ . ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಕೆಲವೇ ಸಮಯದಲ್ಲಿ ಯುವತಿ ಮೃತಪಟ್ಟಿದ್ದಾಳೆ. ಯುವತಿಯ ಸಾವಿನ ಬಗ್ಗೆ ಆಕೆ ಮನೆಯವರಿಗೆ ಕರೆ ಮಾಡಿ ಮಾಹಿತಿ ನೀಡಿ ಯುವಕ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ.
ಹಿರಿಯಡ್ಕ ಹತ್ತಿರದ ಕುಕ್ಕೆಹಳ್ಳಿ ಗ್ರಾಮದ ವಾಸಿಯಾಗಿರುವ ಯುವತಿ ಕೆಲಸ ಮತ್ತು ಶಿಕ್ಷಣ ಉದ್ದೇಶಕ್ಕಾಗಿ ಉಡುಪಿ ನಗರದಲ್ಲಿ ವಾಸವಿದ್ದಳು ಎನ್ನಲಾಗಿದೆ. ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ರಕ್ಷಿತ್ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಸದ್ಯ ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ ಉಡುಪಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.