ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ.

ಬೆಂಗಳೂರು: ಕೊರೊನಾ ಆತಂಕ ಹಿನ್ನೆಲೆ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಸಚಿವ ಸುರೇಶ್​ ಕುಮಾರ್​ ತಿಳಿಸಿದ್ದಾರೆ.

ಈ ಕುರಿತು ತನ್ನ ಫೇಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಯೋಜನೆಯು ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Send this to a friend