ವಿಜಯಪುರ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರದವರಿಗೆ ಸಾಕಾಗಿದ್ದಾರೆ. ಹಾಗಾಗಿ ಅವರು ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದ ಸೋಮವಾರ ರಾತ್ರಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರ ನಂತರ ಉತ್ತರ ಕರ್ನಾಟಕವವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದರು.
ವಿಜಯಪುರಕ್ಕೆ ಬಂದಿದ್ದ ರೂ. 125 ಕೋಟಿ ಅನುದಾನವನ್ನು ಸಿಎಂ ಹಿಂದಕ್ಕೆ ಪಡೆದಿದ್ದಾರೆ. ಸಿಎಂ ಅನುದಾನವನ್ನು ಬರೀ ಶಿವಮೊಗ್ಗಕ್ಕೆ ಒಯ್ಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೊನ್ನೆ ಉಮೇಶ ಕತ್ತಿ ಇವರು ಶಿವಮೊಗ್ಗ ಮುಖ್ಯಮಂತ್ರಿಯೋ ? ಕರ್ನಾಟಕದ ಮುಖ್ಯಮಂತ್ರಿಯೋ ಎಂದು ಹೇಳಿಕೆ ನೀಡಿದ್ದರು ಎಂದು ಯತ್ನಾಳ್ ತಮ್ಮ ಭಾಷಣದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರಕ್ಕೆ ನೀಡಿದ್ದ ಅನುದಾನ ವಾಪಸ್ ಪಡೆದಿದ್ದರೂ ನಾನು ಬಿಡಲ್ಲ. ಹೇಗೆ ತರಬೇಕೋ ತರ್ತಿನಿ. ಬೆಂಗಳೂರಿನವರು ಬಂದು ವಿಜಯಪುರದ ನಮ್ಮ ಮನೆಯ ಮುಂದೆ ನಿಲ್ಲಬೇಕು. ಈಗ ನಾವು ಅವರ ಮನೆಯ ಮುಂದೆ ಹೋಗಿ ನಿಲ್ಲುತ್ತಿದ್ದೇವೆ. ಉತ್ತರ ಕರ್ನಾಟಕದ ಶಾಸಕರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.